ರಕ್ತದಾನ ಅತ್ಯಂತ ಶ್ರೇಷ್ಠವಾದ ದಾನ, ರಕ್ತ ನೀಡುವುದೆಂದರೆ ದೇಶ ಸೇವೆ ಮಾಡಿದಂತೆ- ಐ.ಬಿ.ಶಂಕರ್…

513
firstsuddi

ಚಿಕ್ಕಮಗಳೂರು -ಯುವ ಜನತೆ ಸಮಾಜಮುಖಿಗಳಾಗಿ ಬಾಳಬೇಕು, ತುರ್ತು ಸಂದರ್ಭಗಳಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಮಾನವೀಯತೆಯನ್ನು ಮೆರೆಯಬೇಕು ಎಂದು ಮಾಜಿ ಶಾಸಕ ಐ.ಬಿ.ಶಂಕರ್ ಸಲಹೆ ಮಾಡಿದರು.ಭಾರತ ಸೇವಾದಳದ ಜಿಲ್ಲಾ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಯುವ ಸ್ಪಂದನ ಮತ್ತು ರೆಡ್‍ಕ್ರಾಸ್ ಸಂಸ್ಥೆ ವತಿಯಿಂದ ನಗರದ ಸೇವಾದಳದ ಕಛೇರಿಯಲ್ಲಿ ಶನಿವಾರ ನಡೆದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನಮ್ಮ ಹಿರಿಯರಲ್ಲಿ ಮಾನವೀಯತೆ ಇತ್ತು ಅದರಿಂದಾಗಿ ಅವರು ಆಪತ್ಕಾಲದಲ್ಲಿ ಇನ್ನೊಬ್ಬರ ನೆರವಿಗೆ ಧಾವಿಸುತ್ತಿದ್ದರು, ಆದರೆ ಇಂದು ಮಾನವೀಯ ಮೌಲ್ಯಗಳು ಕ್ಷೀಣಿಸುತ್ತಿವೆ ಇದರಿಂದಾಗಿ ಇನ್ನೊಬ್ಬರ ನೆರವಿಗೆ ಧಾವಿಸುವ ಪ್ರವೃತ್ತಿ ಮರೆಯಾಗುತ್ತಿದೆ ಎಂದು ವಿಷಾದಿಸಿದರು.ರಕ್ತದಾನ ಅತ್ಯಂತ ಶ್ರೇಷ್ಠವಾದ ದಾನ, ರಕ್ತ ನೀಡುವುದೆಂದರೆ ದೇಶ ಸೇವೆ ಮಾಡಿದಂತೆ ಎಂದ ಅವರು ಇಂದಿನ ಪೀಳಿಗೆ ಇದನ್ನು ಅರ್ಥ ಮಾಡಿಕೊಳ್ಳಬೇಕು ಆಪ್ಕತಾಲದಲ್ಲಿ ನೆರವಿಗೆ ಮುಂದಾಗುವ ಗುಣ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಡಾ|| ಮಂಜುಳಾ ಹುಲ್ಲಹಳ್ಳಿ ಮಾತನಾಡಿ ದೇಶದಲ್ಲಿ ಮಾನವೀಯತೆ ಮರೆಯಾಗುತ್ತಿರುವುದರಿಂದಾಗಿ ರಕ್ತದಾನಿಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ವಿಷಾದಿಸಿದರು .ಭಾರತ ಸೇವಾದಳದ ಜಿಲ್ಲಾ ಸಂಘಟಕ ಚಂದ್ರಕಾಂತ್, ತಾಲ್ಲೂಕು ಸಂಘಟಕ ಎಸ್.ಈ.ಲೋಕೇಶ್ವರಾಚಾರ್, ಶಿಕ್ಷಕಿ ಸುಮಾರಾಣಿ, ನೆಹರು ಯುವಕೇಂದ್ರದ ಲೆಕ್ಕಾಧಿಕಾರಿ ಮಂಜುನಾಥ್ ರಾವ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಜಲಜಾಕ್ಷಿ, ರೆಡ್‍ಕ್ರಾಸ್ ಸಂಸ್ಥೆಯ ಅಧ್ಯಕ್ಷ ಡಾ|| ಸುಂದರಗೌಡ, ಸಾರ್ವಜನಿಕ ಆಸ್ಪತ್ರೆ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ|| ಮುರಳೀಧರ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಜಗದೀಶಾಚಾರ್ ಉಪಸ್ಥಿತರಿದ್ದರು.