ವೃದ್ಧೆಯೋರ್ವರ ಕಾಲಿನ ಮೇಲೆ ಹರಿದ  ಬಿಎಂಟಿಸಿ ಬಸ್…

270
firstsuddi

ಬೆಂಗಳೂರು: ವೃದ್ಧೆಯೋರ್ವರ ಕಾಲಿನ ಮೇಲೆ ಬಿಎಂಟಿಸಿ ಬಸ್ ಹರಿದು ವೃದ್ದೆಯ ಎಡಗಾಲಿಗೆ ಗಂಭೀರ ಗಾಯಗಳಾಗಿರುವ ಘಟನೆ ನಗರದ ಕೆ ಆರ್​ ಮಾರ್ಕೆಟ್ ಬಸ್ ನಿಲ್ದಾಣದಲ್ಲಿ ನಡೆದಿದ್ದು, ಘಟನೆ ನಡೆದ  ಬಳಿಕ ಸ್ಥಳದಿಂದ ಪರಾರಿಯಾಗಲು ಯತ್ನಿಸುತ್ತಿದ್ದ ಬಸ್ ಚಾಲಕನಿಗೆ ಸಾರ್ವಜನಿಕರು ಹಿಗ್ಗಾ ಮುಗ್ಗ ಥಳಿಸಿದ್ದಾರೆ.  ಗಂಭೀರವಾಗಿ ಗಾಯಗೊಂಡಿದ್ದ ವೃದ್ಧೆಯನ್ನು ಸಾರ್ವಜನಿಕರು  ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.