ಚೆನ್ನೈ : ಕಾಲಿವುಡ್ ನ ಸ್ಟಾರ್ ನಟ ಚಿಯಾನ್ ವಿಕ್ರಮ್ ಅವರ ಮನೆಯಲ್ಲಿ ಬಾಂಬ್ ಇರಿಸಲಾಗಿದೆ ಎಂದು ಬೆದರಿಕೆ ಹಾಕಲಾಗಿದೆ. ಚೆನ್ನೈನ ಬೆಸೆಂಟ್ ನಗರದಲ್ಲಿರುವ ವಿಕ್ರಮ್ ಅವರ ಮನೆಯಲ್ಲಿ ಬಾಂಬ್ ಇಟ್ಟಿರುವುದಾಗಿ ನಿನ್ನೆ ಮಧ್ಯಾಹ್ನ ಪೊಲೀಸ್ ಕಂಟ್ರೋಲ್ ರೂಂ ಗೆ ಅನಾಮದೇಯ ವ್ಯಕ್ತಿಯ ಹೆಸರಿನಲ್ಲಿ ಕರೆ ಮಾಡಲಾಗಿತ್ತು. ಕೂಡಲೇ ಬಾಂಬ್ ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಸಂಪೂರ್ಣ ಮನೆಯನ್ನು ತಪಾಸಣೆ ನಡೆಸಿ ಬಳಿಕ ಇದೊಂದು ಹುಸಿ ಕರೆ ಎಂದು ಮಾಹಿತಿ ನೀಡಿದರು. ತಮಿಳುನಾಡಿನಲ್ಲಿ ಈ ಹಿಂದೆಯೂ ಕೂಡಾ ತಮಿಳುನಾಡು ಮುಖ್ಯಮಂತ್ರಿ ಇ.ಕೆ. ಪಳನಿಸ್ವಾಮಿ, ಹಿರಿಯ ನಟ ರಜನಿಕಾಂತ್, ವಿಜಯಕಾಂತ್ ಹಾಗೂ ನಟ ವಿಜಯ್, ಸೂರ್ಯ, ಅಜಿತ್ ಹಾಗೂ ಧನುಷ್ ಅವರ ನಿವಾಸದಲ್ಲಿಯೂ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಮಾಡಲಾಗಿತ್ತು.










