ಚಿಕ್ಕಮಗಳೂರು : ತರಕಾರಿ ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆಯೊಳಗೆ ಲಾರಿ ನುಗ್ಗಿ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಜೇನುಗದ್ದೆ ಗ್ರಾಮದಲ್ಲಿ ನಡೆದಿದೆ. ಸುರೇಶ್(10) ಮೃತ ಬಾಲಕ ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರಿನಿಂದ ಕುಂದಾಪುರ ಮಾರ್ಗವಾಗಿ ತರಕಾರಿಗಳನ್ನು ಹೊತ್ತು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹಂಚಿನ ಮನೆಯೊಳಗೆ ನುಗ್ಗಿದ್ದು, ಪರಿಣಾಮ ಮನೆ ಮುಂದೆ ಆಟವಾಡುತ್ತಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Home ಸ್ಥಳಿಯ ಸುದ್ದಿ ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಮನೆಯೊಳಗೆ ನುಗ್ಗಿದ ಮಿನಿ ಲಾರಿ-ಬಾಲಕ ಸ್ಥಳದಲ್ಲೇ ಸಾವು…










