ತುಮಕೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿಗಳ ಆಶೀರ್ವಾದ ಪಡೆದು, ಅವರ ಆರೋಗ್ಯದ ಕುರಿತು ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಡೆದಾಡುವ ದೇವರು ಶ್ರೀಗಳ ದರ್ಶನ ಮಾಡಿ ಬಂದಿದ್ದೇನೆ. ಆಸ್ಪತ್ರೆಯಂತೆ ಮಠದಲ್ಲೂ ಕೂಡ ಚಿಕಿತ್ಸೆಯನ್ನು ನೀಡಲಾಗುತ್ತದೆ. ಕಿರಿಯ ಶ್ರೀಗಳು ತುಂಬಾ ನೊಂದುಕೊಂಡಿದ್ದಾರೆ. ಅವರಿಗೆ ಧೈರ್ಯ ಹೇಳುತ್ತೇನೆ. ಸಂಜೆವರೆಗೂ ಇಲ್ಲೇ ಇರುತ್ತೇನೆ ಎಂದು ತಿಳಿಸಿದರು.