ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರೈತರ ಹಿತಕಾಯಬೇಕಾದ ಮುಖ್ಯಮಂತ್ರಿಗಳು ವಿದೇಶದಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಫ್ರಾನ್ಸ್ ಗೆ ಮಗನ ಸಿನಿಮಾ ಶೂಟಿಂಗ್ ನೋಡಲು ಹೋಗಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದ್ದು, ಜನರೇ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.