ಬೆಂಗಳೂರು: ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಧಿಕಾರ ನಡೆಸುವ ನೈತಿಕ ಹಕ್ಕಿಲ್ಲ. ಕೇವಲ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಉದ್ದೇಶದಿಂದ ಕಾಂಗ್ರೆಸ್ ನಿಮಗೆ ಅಧಿಕಾರ ಕೊಟ್ಟಿದ್ದಾರೆ. ನಿಮಗೆ ಜನ ಕೊಟ್ಟಿರುವುದು ಕೇವಲ 37 ಸೀಟುಗಳು ಮಾತ್ರ. ಸಂಪನ್ಮೂಲ ಕ್ರೋಡೀಕರಣದಲ್ಲಿ ವಿಫಲರಾಗಿದ್ದೀರಿ. ರೈತ ಮಹಿಳೆಗೆ ಎಲ್ಲಿ ಮಲಗಿದ್ದೆ ಎಂದು ಕೇಳಿ ನಾಡಿನ ಹೆಣ್ಣು ಮಕ್ಕಳ ಸಮೂಹಕ್ಕೆ ಅವಮಾನ ಮಾಡಿದ್ದೀರಿ. ಕೂತಲ್ಲಿ ನಿಂತಲ್ಲಿ ರಾಜೀನಾಮೆಗೆ ಒತ್ತಾಯಿಸುವಂತೆ ಹೆಣ್ಣು ಮಕ್ಕಳಿಗೆ ಮನವಿ ಮಾಡುತ್ತೇನೆ. ನಮ್ಮ ಹೋರಾಟ ಇಂದು ಆರಂಭವಾಗಿದೆ, ಹೋರಾಟ ಮುಂದುವರಿಯುತ್ತದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಯಡಿಯೂರಪ್ಪ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.










