ಶಿವಮೊಗ್ಗ:ಲೋಕಸಭಾ ಕ್ಷೇತ್ರದ ಉಪಚುನಾವಣೆ ಮತದಾನ ಆರಂಭವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಕುಟುಂಬ ಸಮೇತ ಶಿಕಾರಿಪುರದ ಶ್ರೀ ಹುಚ್ಚುರಾಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಮತಗಟ್ಟೆಗೆ ಕುಟುಂಬ ಸಮೇತರಾಗಿ ಆಗಮಿಸಿ ಮತದಾನ ಮಾಡಿದ್ದು, ಆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನ್ನ ಮಗ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸುವುದು ಖಚಿತ . ಹಾಗೆಯೆ ಜಮಖಂಡಿ ಮತ್ತು ಬಳ್ಳಾರಿಯಲ್ಲಿಯೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.










