ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಬಿಎಸ್ಪಿ ಪಕ್ಷದ ಶಾಸಕ ಮತ್ತು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾಗಿದ್ದ ಎನ್ ಮಹೇಶ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದು, ಪಕ್ಷದ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕಾಗಿದೆ ಹಾಗಾಗಿ ರಾಜೀನಾಮೆ ನೀಡಿದ್ದೇನೆ. ರಾಜ್ಯದಲ್ಲಿ ಬಿಎಸ್ಪಿ ಪಕ್ಷವನ್ನು ಕಟ್ಟುವ ಅವಶ್ಯಕತೆ ಇದೆ. ನನ್ನ ಕ್ಷೇತ್ರದ ಕಡೆಯೂ ನಾನು ಗಮನ ಕೊಡಬೇಕಾಗಿದೆ ಎಂದು ಎನ್ ಮಹೇಶ್ ಹೇಳಿದ್ದಾರೆ.










