ಬೆಂಗಳೂರು- ಬಿ.ಜೆ.ಪಿ ರಾಷ್ಟ್ರಧ್ಯಕ್ಷ ಅಮಿತ್ ಶಾರ ಭೇಟಿಗೆ ಅಹಮದಾಬಾದ್ ಗೆ ತೆರಳಿದ್ದ ಬಿ.ಜೆ.ಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರಿಗೆ ಅಮಿತ್ ಶಾ ರಾಜ್ಯದ ರಾಜಕೀಯದ ಬಗ್ಗೆ ಸೂಚನೆ ನೀಡಿದ್ದು, ಪಕ್ಷ ಎಲ್ಲವನ್ನು ಸೂಕ್ಮವಾಗಿ ಗಮನಿಸುತ್ತಿದ್ದು ಯಾವ ಸಂದರ್ಭದಲ್ಲಿ ಏನು ಮಾಡಬೇಕು ಎಂಬುದನ್ನು ನಾವು ನಿಮಗೆ ಹೇಳುತ್ತೇವೆ. ಹಾಗೂ ರಾಜ್ಯದ ಸಮ್ಮಿಶ್ರ ಸರ್ಕಾರ ಅದು ತಾನಾಗಿಯೇ ಬಿದ್ದು ಹೋಗುತ್ತದೆ. ಲೋಕಸಭಾ ಚುನಾವಣೆಯ ಬಗ್ಗೆ ಗಮನಹರಿಸಬೇಕು ಅದಕ್ಕೆ ಬೇಕಾದ ಸಿದ್ದತೆಯನ್ನು ಮಾಡಬೇಕು ಮುಂದಿನ ಅವಧಿಗೂ ನರೇಂದ್ರ ಮೋದಿ ಅವರೇ ಪ್ರಧಾನಿಯಾಗಬೇಕು. ಅದಕ್ಕಾಗಿ ಕರ್ನಾಟಕದಿಂದ 25ರಿಂದ 28 ಸ್ಥಾನ ಗೆಲ್ಲಲು ಪ್ರಯತ್ನಿಸಿ ಎಂದು ಅಮಿತ್ ಶಾ, ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.