ಬೆಂಗಳೂರು : ಬಳ್ಳಾರಿಯಲ್ಲಿ ಕಾರು ಅಪಘಾತ ಮಾಡಿದ ಪ್ರಭಾವಿ ವ್ಯಕ್ತಿಯನ್ನು ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರದಿಂದ ಮುಚಿ ಹಾಕುವ ಪ್ರಯತ್ನ ನಡೆಯುತ್ತಿದೆ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಕಳೆದ ಎರಡು ದಿನಗಳ ಹಿಂದೆ ಬಳ್ಳಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಅಮಾಯಕರು ಮೃತಪಟ್ಟಿದ್ದು, ಆರ್. ಅಶೋಕ್ ಅವರ ಪುತ್ರ ಕಾರನ್ನು ಚಲಾಯಿಸುತ್ತಿದ್ದರು ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತು ಟ್ವಿಟರ್ ಮೂಲಕ ಪ್ರತಿಕ್ರಯಿಸಿದ ಕಾಂಗ್ರೆಸ್ ಬಳ್ಳಾರಿ ಅಪಘಾತದಲ್ಲಿ ಇಬ್ಬರು ಅಮಾಯಕರು ಮರಣ ಹೊಂದಿದ್ದಾರೆ. ಅಪಘಾತ ಮಾಡಿದ ಪ್ರಭಾವಿ ವ್ಯಕ್ತಿಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರದಿಂದ ಈ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಸಲ್ಲದು. ಸತ್ಯ ಮತ್ತು ನ್ಯಾಯ ಗೆಲ್ಲಬೇಕು ಎಂದು ಆರೋಪಿಸಿದೆ.











