ಶ್ರೀನಗರ: ಪೂಂಚ್ ಜಿಲ್ಲೆಯ ಮಂಡಿ ತೆಹ್ಸಿಲ್ ನ ಪ್ಲೆರಾ ಎಂಬಲ್ಲಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ್ದು, ಪರಿಣಾಮ 11ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ ಲೋರನ್ ಕಡೆಗೆ ತೆರಳುತಿತ್ತು ಎನ್ನಲಾಗಿದ್ದು, ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.










