ಮಂಡ್ಯದಲ್ಲಿ ನಾಲೆಗೆ ಉರುಳಿದ ಬಸ್​: 22ಕ್ಕೂ ಹೆಚ್ಚು ಜನರ ಸಾವು…

261
firstsuddi

ಮಂಡ್ಯ: ಖಾಸಗಿ ಬಸ್ಸೊಂದು ನಾಲೆಗೆ ಉರುಳಿ ಮಕ್ಕಳು ಸೇರಿದಂತೆ 22ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಪಾಂಡವಪುರದ ಕನಗನಮರಡಿ ಬಳಿ ನಡೆದಿದೆ. ಪಾಂಡವಪುರದಿಂದ ಕನಗನಮರಡಿ ಮಾರ್ಗವಾಗಿ ಮಂಡ್ಯಕ್ಕೆ ತೆರಳುತ್ತಿದ್ದ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಬಸ್‌ ನಾಲೆಗೆ ಬಿದ್ದಿದ್ದು, ಬಸ್ ಸಂಪೂರ್ಣ ನೀರಿನಲ್ಲಿ ಮುಳುಗಿದ್ದರಿಂದ ಪ್ರಯಾಣಿಕರು ಹೊರಬರಲಾಗದೆ ಹಲವು ಪ್ರಯಾಣಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದು,  ಬಸ್‍ನಲ್ಲಿ 30ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.