ಬೆಂಗಳೂರು: ಬಿಜೆಪಿ ಟ್ವಿಟ್ ಮೂಲಕ ಅಣ್ಣಾ ಕುಮಾರಣ್ಣ, ರವಿ ಪೂಜಾರಿಯನ್ನು ಬಂಧಿಸಿದ್ದು ನಮ್ಮ ಸಮ್ಮಿಶ್ರ ಸರ್ಕಾರವೇ ಎಂದು ತಮಗೆ ತಾವೇ ಕೀರ್ತಿ ಪಡೆಯುವ ಮೊದಲು, ಕಂಪ್ಲಿ ಶಾಸಕ ಗಣೇಶ್‌ರನ್ನು ಬಂಧಿಸಿ ನಿಮ್ಮ ಪೌರುಷ ತೋರಿಸಿ ಎಂದು ಬಿಜೆಪಿ ಟ್ವಿಟ್ ಮಾಡಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಟ್ವಿಟ್ಟರ್‌ನಲ್ಲಿ ನನ್ನನ್ನು ಅಣ್ಣ ಎಂದು ಸಂಬೋಧಿಸಿದ್ದಕ್ಕೆ ಧನ್ಯವಾದ. ಬಿಜೆಪಿಯವರಿಗೆ ಶೀಘ್ರದಲ್ಲೇ ಸಿಹಿ ಸುದ್ದಿ ಸಿಗಲಿದೆ. ಕಂಪ್ಲಿ ಶಾಸಕ ಗಣೇಶ್‌ರನ್ನು ಬಂಧಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.










