ಸಿದ್ದಗಂಗಾ ಶ್ರೀಗಳ ಆರೋಗ್ಯವನ್ನು ಸಿಎಂ ಕರೆ ಮಾಡಿ ವಿಚಾರಿಸಿದ್ದಾರೆ :ಡಾ.ಪರಮೇಶ್…

247
firstsuddi

ತುಮಕೂರು:  ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ನಮ್ಮ ನಿರೀಕ್ಷೆಯಂತೆ  ಚೇತರಿಕೆ ಆಗುತ್ತಿಲ್ಲ ಎಂದು ವೈದ್ಯ ಡಾ.ಪರಮೇಶ್  ಅವರು ತಿಳಿಸಿದ್ದಾರೆ. ಇಂದು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು  ಕಿರಿಯ ಶ್ರೀಗಳಿಗೆ  ಇಂದು ಬೆಳಗ್ಗೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು  ಕರೆ ಮಾಡಿ ಶ್ರೀಗಳ ಆರೋಗ್ಯ ವಿಚಾರಿಸಿದ್ದು, ಅವರಿಗೆ ಹೆಚ್ಚಿನ ಚಿಕಿತ್ಸೆಯ ಕುರಿತು ಪರಿಶೀಲನೆ ನಡೆಸಲು ಜಯದೇವ ಆಸ್ಪತ್ರೆ ವೈದ್ಯ ಡಾ. ಮಂಜುನಾಥ್ ನೇತೃತ್ವದ ವೈದ್ಯರ ತಂಡ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು.