ಬೆಂಗಳೂರು: ಮೈತ್ರಿ ಸರ್ಕಾರದ ಸಂಪುಟ ಸಭೆ ಇಂದು ನಡೆಯಲಿದ್ದು, ಸಭೆಯಲ್ಲಿ ಕೊಡಗಿನಲ್ಲಿ ಅತಿವೃಷ್ಟಿಯಿಂದ ಆಗಿರುವ ನಷ್ಟದ ಬಗ್ಗೆ, ಹಾಗೂ ಕೊಡಗಿನ ಸಂತ್ರಸ್ಥರ ನೆರವಿಗೆ ಧಾವಿಸುವ ಹಾಗೂ ತಕ್ಷಣದ ಪರಿಹಾರ ಕಾಮಗಾರಿಗಳ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸುವ ಸಾಧ್ಯತೆ ಇದ್ದು , ರಾಜ್ಯದ ಪ್ರವಾಹ, ಬರ ಪರಿಸ್ಥಿತಿಗಳ ಬಗ್ಗೆ , ರೈತರ ಸಾಲಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ ಹಲವಾರು ವಿಚಾರಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.