ಶ್ರದ್ದೆ ಮತ್ತು ಪರಿಶ್ರಮದಿಂದ ಸಾಧನೆ ಮಾಡಿದರೆ ಸಾಧಕರಾಗಲು ಸಾಧ್ಯ : ಡಾ|| ಡಿ.ಎಲ್.ವಿಜಯಕುಮಾರ್…

202
firstsuddi

ಚಿಕ್ಕಮಗಳೂರು: ವಿದ್ಯಾರ್ಥಿಗಳು ಪ್ರತಿಭಾವಂತರಾಗಬೇಕಾದರೆ ಕೀಳರಿಮೆಯನ್ನು ತೊರೆದು ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು ಎಂದು ಎಂಇಎಸ್ ಕಾಲೇಜಿನ ಗೌರವ ಕಾರ್ಯದರ್ಶಿ ಡಾ|| ಡಿ.ಎಲ್.ವಿಜಯಕುಮಾರ್ ಸಲಹೆ ಮಾಡಿದರು.
ನಗರದ ಮಲೆನಾಡು ವಿದ್ಯಾಸಂಸ್ಥೆಯಲ್ಲಿ ಗುರುವಾರ ನಡೆದ ಪ್ರೌಢಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಿ ಪುರಸ್ಕರಿಸಿ ಅವರು ಮಾತನಾಡಿದರು.
ಶ್ರದ್ದೆ ಮತ್ತು ಪರಿಶ್ರಮದಿಂದ ಸಾಧನೆ ಮಾಡಿದರೆ ಸಾಧಕರಾಗಲು ಸಾಧ್ಯ ಅಂತಹ ವಿದ್ಯಾರ್ಥಿಗಳು ಮಾತ್ರ ಪ್ರತಿಭಾವಂತರಾಗಿ ಹೊರಹೊಮ್ಮುತ್ತಾರೆ ಎಂದ ಅವರು ಎಂಇಎಸ್ ಸಂಸ್ಥೆ ಶಿಕ್ಷಣಕ್ಕಾಗಿ ಎಲ್ಲ ರೀತಿಯ ಸೌಲಭ್ಯಗಳನ್ನೂ ವಿದ್ಯಾರ್ಥಿಗಳಿಗೆ ನೀಡುತ್ತಿದ್ದು ಅದನ್ನು ಸದುಪಯೋಗ ಪಡಿಸಿಕೊಂಡು ವಿದ್ಯಾವಂತರಾಗಬೇಕು ಎಂದು ಕಿವಿಮಾತು ಹೇಳಿದರು.
ಜಿಲ್ಲಾ ಕಸಾಪ ಅಧ್ಯಕ್ಷ ಕುಂದೂರು ಅಶೋಕ್ ಮಾತನಾಡಿ ವಿದ್ಯಾವಂತರಾದರೆ ಮಾತ್ರ ಸಮಾಜದಲ್ಲಿ ಸ್ಥಾನ, ಮಾನ, ಗೌರವ ದೊರೆಯುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಅಧ್ಯಕ್ಷ ಎನ್.ಕೇಶವಮೂರ್ತಿ ಶ್ರದ್ದೆಯಿಂದ ವಿದ್ಯಾರ್ಜನೆ ಮಾಡುವ ಮೂಲಕ ವಿದ್ಯಾರ್ಥಿಗಳು ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಮಾರಂಭದಲ್ಲಿ ಪ್ರೋತ್ಸಾಹ ಧನ ನೀಡಿ ಪುರಸ್ಕರಿಸಲಾಯಿತು, ವಾರ್ಷಿಕೋತ್ಸವದ ಅಂಗವಾಗಿ ನಡೆಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು.
ಶಿಕ್ಷಕಿ ಕೆ.ಎಂ.ಹೇಮಾಮಾಲಿನಿ ವಾರ್ಷಿಕ ವರದಿಯನ್ನು ಮಂಡಿಸಿದರು, ಸಮಾರಂಭಕ್ಕೆ ಮುನ್ನ ನಡೆದ ಕ್ರೀಡೋತ್ಸವವನ್ನು ಡಾ|| ಕಾರ್ತೀಕ್ ವಿಜಯ್ ಉದ್ಘಾಟಿಸಿದರು, ಶಾಲೆಯ ಹಳೆಯ ವಿದ್ಯಾರ್ಥಿ ಲವ್ಲೀನಾ ಲೋಬೋ ಅವರನ್ನು ಸನ್ಮಾನಿಸಲಾಯಿತು, ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಿತು.
ಸಂಸ್ಥೆಯ ನಿರ್ದೇಶಕಿ ಜಯಶ್ರೀ ಜೋಷಿ, ಆಡಳಿತಾಧಿಕಾರಿ ಶಾಂತಕುಮಾರಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ಅಧಿಕಾರಿ ಜಯರಾಂ ಉಪಸ್ಥಿತರಿದ್ದರು.
ಶಿಕ್ಷಕಿ ರೂಪ ಕಾರ್ಯಕ್ರಮವನ್ನು ನಿರೂಪಿಸಿದರು, ಮುಖ್ಯಶಿಕ್ಷಕ ಬಿ.ಎಂ.ಲೋಕೇಶ್ ಸ್ವಾಗತಿಸಿದರು, ಜಿ.ಬಿ.ಸುರೇಶ್ ವಂದಿಸಿದರು.