ಬೆಂಗಳೂರು: ಕ್ಯಾಂಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ ಬಳಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ವಿಶಾಲ್, ಪ್ರಜ್ವಲ್, ಭೂಷಣ್ ಮೃತಪಟ್ಟಿದ್ದಾರೆ. ಮೂವರೂ ಕಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಾಗಿದ್ದರು.ಕಾರಿನಲ್ಲಿದ್ದ ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಏರ್ಪೋರ್ಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.