ಡಿವೈಡರ್ ಗೆ ಕಾರು ಡಿಕ್ಕಿ, ನಾಲ್ವರ ದುರ್ಮರಣ…

307
firstsuddi

ದಾವಣಗೆರೆ: .ಹರಿಹರ ತಾಲೂಕಿನ ಹರಗನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದ  ಪರಿಣಾಮ ಬೆಂಗಳೂರು ಮೂಲದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮೃತರನ್ನು ವಿನಯ್, ಸಿದ್ದಪ್ಪ, ಅಜಯ್, ಗಿರೀಶ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು,ಬೆಂಗಳೂರಿನಿಂದ ಗೋಕಾಕ್ ಫಾಲ್ಸ್ ಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಹರಿಹರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.