ಕಾರು ಅಪಘಾತ: ದರ್ಶನ್ ಕೈ ಗೆ ಗಂಭೀರ ಗಾಯ…

429
firstsuddi

ಮೈಸೂರು :ಚಾಲೆಂಜಿಂಗ್ ಸ್ಟಾರ್ ದರ್ಶನ್, ಹಿರಿಯ ನಟ ದೇವರಾಜ್, ಪ್ರಜ್ವಲ್ ದೇವರಾಜ್ ಅವರು ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿದ್ದು, ಸೋಮವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಹಿನಕಲ್ ಜಂಕ್ಷನ್ ಬಳಿ ಕಾರು ಸ್ಕಿಡ್ ಆಗಿ ಅವಘಡ ನಡೆದಿದ್ದು , ದರ್ಶನ್ ಕೈ ಗೆ ಗಂಭೀರ ಗಾಯವಾಗಿದ್ದು, ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎಂದು ತಿಳಿದು ಬಂದಿದ್ದು, ದೇವರಾಜ್ ಮತ್ತು ಪ್ರಜ್ವಲ್ ದೇವರಾಜ್ ಅವರಿಗೆ ಸಣ್ಣಪುಟ್ಟ ಗಾಯವಾಗಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.