ಸ್ವಾಮೀಜಿ ಕಾನೂನು ಉಲ್ಲಂಘನೆ ಮಾಡಿದ್ದಾರೆ, ಲಾಠಿ ಚಾರ್ಜ್ ಅನಿವಾರ್ಯ ಆಗಿತ್ತು: ಜಿ.ಪರಮೇಶ್ವರ್.
ಬೆಂಗಳೂರು: ಪಂಚಮಸಾಲಿ ಪ್ರತಿಭಟನೆ ವೇಳೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಕಾನೂನು ಉಲ್ಲಂಘನೆ ಮಾಡಿದ್ದಾರೆ. ಕೆಲವರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಆದ್ದರಿಂದ, ಲಾಠಿ ಚಾರ್ಜ್ ಮಾಡುವ ಅನಿವಾರ್ಯ ಇತ್ತು ಎಂದು...
ಅಪಘಾತದಲ್ಲಿ ಕಾರು ರೇಸಿಂಗ್ ಚಾಂಪಿಯನ್ ರಂಜಿತ್ ಬಲ್ಲಾಳ್ ಸಾವು.
ಉಡುಪಿ: ಕುಂದಾಪುರ ಬಳಿ ಸೋಮವಾರ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ 59 ವರ್ಷದ ರಾಷ್ಟ್ರೀಯ ಕಾರು ರೇಸಿಂಗ್ ಚಾಂಪಿಯನ್ ಒಬ್ಬರು ಸಾವನ್ನಪ್ಪಿದ್ದಾರೆ. ಮಂಗಳೂರು ಮೂಲದ ರಂಜಿತ್ ಬಲ್ಲಾಳ್ ಮೃತಪಟ್ಟವರು. ತನ್ನ ಕುಟುಂಬಸ್ಥರೊಂದಿಗೆ ಮೂರು ದಿನಗಳ...
ಪಂಚಮಸಾಲಿ ಪ್ರತಿಭಟನೆಯನ್ನು ಸರ್ಕಾರ ಲಾಠಿಚಾರ್ಜ್ ಮೂಲಕ ಹತ್ತಿಕ್ಕುತ್ತಿದೆ: ಜಯಮೃತ್ಯುಂಜಯ ಶ್ರೀ ಆರೋಪ.
ಬೆಂಗಳೂರು: 12 ಜಿಲ್ಲೆಗಳಲ್ಲಿ ನಡೆದ ನಮ್ಮ ಪ್ರತಿಭಟನೆಯಲ್ಲಿ ಯಾವುದೇ ಒತ್ತಡ ಅಥವಾ ಕಿರುಕುಳ ಇರಲಿಲ್ಲ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಟ್ರ್ಯಾಕ್ಟರ್...
ಎಸ್‍ಎಂ.ಕೃಷ್ಣ ಗೌರವಾರ್ಥ ಪ್ರಶಸ್ತಿ ನೀಡಿ ಸ್ಮಾರಕ ನಿರ್ಮಿಸಿ: ಸರ್ಕಾರಕ್ಕೆ ಪಕ್ಷಾತೀತವಾಗಿ ರಾಜಕಾರಣಿಗಳ ಒತ್ತಾಯ.
ಬೆಂಗಳೂರು: ಮಂಗಳವಾರ ಮುಂಜಾನೆ ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್‍ಎಂ.ಕೃಷ್ಣ ಅವರ ಗೌರವಾರ್ಥ ಪ್ರಶಸ್ತಿಗಳನ್ನು ಸ್ಥಾಪಿಸಬೇಕು ಮತ್ತು ಸ್ಮಾರಕವನ್ನು ನಿರ್ಮಿಸಬೇಕು ಎಂದು ರಾಜಕಾರಣಿಗಳು ರಾಜ್ಯ ಸರ್ಕಾರವನ್ನು ಪಕ್ಷಾತೀತವಾಗಿ ಒತ್ತಾಯಿಸಿದ್ದಾರೆ. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ...
ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ: ರಾಜ್ಯದ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ.
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಮತ್ತೆ ಚಂಡಮಾರುತ ಉದ್ಭವಿಸಿದ್ದು ರಾಜ್ಯದಲ್ಲಿ ನಾಳೆ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ 10 ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ,...
ಪಂಚಮಸಾಲಿಗರಿಗೆ 2ಎ ಮೀಸಲಾತಿ ನೀಡಬಾರದು: ಸಿಎಂಗೆ ಹಿಂದುಳಿದ ಜಾತಿಗಳ ಒಕ್ಕೂಟದ ಮನವಿ.
ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ಪ್ರವರ್ಗ-2ಎಗೆ ಸೇರಿಸಬಾರದು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಸಿಎಂ ಸಿದ್ದರಾಮಯ್ಯಗೆ ಮನವಿ ಪತ್ರ ಸಲ್ಲಿಸಿದೆ. ಕಾವೇರಿ ನಿವಾಸದಲ್ಲಿ ಇಂದು ಸಿಎಂ ಅವರನ್ನು ಭೇಟಿಯಾದ...
ಭೀಕರ ರಸ್ತೆ ಅಪಘಾತ ಬೈಕ್‍ಗೆ ಲಾರಿ ಡಿಕ್ಕಿ ಕೂಲಿ ಕೆಲಸಕ್ಕೆ ಹೊರಟಿದ್ದ ದಂಪತಿ ಸಾವು.
ಕೊಪ್ಪಳ: ಕೂಲಿ ಕೆಲಸಕ್ಕೆ ಹೊರಟಿದ್ದ ದಂಪತಿಯ ಬೈಕ್‍ಗೆ ಲಾರಿ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೆಸರಟ್ಟಿ ಗ್ರಾಮದ ಬಳಿ ನಡೆದಿದೆ. ಮೃತ ದಂಪತಿಯನ್ನು ಮರಕುಂಬಿ...
ಶರಾವತಿ ಜಲವಿದ್ಯುತ್ ಯೋಜನೆ ಕುರಿತು ಸಂಸತ್‍ನಲ್ಲಿ ಕನ್ನಡದಲ್ಲೇ ಪ್ರಸ್ತಾಪಿಸಿದ ಬಿ.ವೈ.ರಾಘವೇಂದ್ರ.
ನವದೆಹಲಿ: ಶರಾವತಿ ಜಲವಿದ್ಯುತ್ ಯೋಜನೆ ಸಂತ್ರಸ್ತರ ವಿಚಾರವನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಲೋಕಸಭೆಯಲ್ಲಿ ಕನ್ನಡದಲ್ಲೇ ಪ್ರಸ್ತಾಪಿಸಿ ಗಮನ ಸೆಳೆದರು. ಅನೇಕ ವರ್ಷಗಳ ಒಂದು ಸಮಸ್ಯೆ. ಸ್ವಾತಂತ್ರ್ಯ ಬಂದು 77 ವರ್ಷ ಆಯ್ತು. ಸಂವಿಧಾನ...
ಮುರುಡೇಶ್ವರದಲ್ಲಿ ಸಮುದ್ರ ಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆ.
ಕಾರವಾರ: ಮುರುಡೇಶ್ವರದಲ್ಲಿ ಸಮುದ್ರ ಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆಯಾಗಿವೆ. ಕರಾವಳಿ ಕಾವಲುಪಡೆ ತಂಡ ಮೃತದೇಹಗಳನ್ನು ಹೊರಕ್ಕೆ ತೆಗೆದಿವೆ. ದೀಕ್ಷಾ (15), ಲಾವಣ್ಯ (15) ಹಾಗೂ ವಂದನಾ (15) ಮೃತದೇಹಗಳು ಪತ್ತೆಯಾಗಿವೆ. ಮುರುಡೇಶ್ವರದ...
ಮುಡಾ ಹಗರಣ: ತನಿಖಾ ವರದಿ ಹೈಕೋರ್ಟ್’ಗೆ ಸಲ್ಲಿಕೆ.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ನಿವೇಶನ ಹಂಚಿಕೆ ಸಂಬಂಧ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು, ಡಿಸೆಂಬರ್ 9 ರವರೆಗೆ ನಡೆದಿರುವ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಹೈಕೋರ್ಟ್‍ನ ಹಿಂದಿನ ಆದೇಶದಂತೆ ಲೋಕಾಯುಕ್ತ...












