ಪಠ್ಯಪುಸ್ತಕ ಪರಿಷ್ಕರಣೆ – ಅನುಮತಿ ವಾಪಸ್ ಪಡೆದ ಸಾಹಿತಿಗಳಾದ ಮೂಡ್ನಾಕೂಡು, ಕಂಬಳಿ.
ಬೆಂಗಳೂರು : ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಸಾಹಿತಿಗಳ ಹೋರಾಟ ಮುಂದುವರೆದಿದೆ. ಇದೀಗ ಸಾಹಿತಿ ಮೂಡ್ನಕೂಡು ಚಿನ್ನಸ್ವಾಮಿ ಹಾಗೂ ಈರಪ್ಪ ಎಂ ಕಂಬಳಿ ಅವರು ಬರೆದಿರುವ ಪ್ರಬಂಧ ಹಾಗೂ ಕವಿತೆಯನ್ನು ಪ್ರಕಟಿಸಲು ಅನುಮತಿಯನ್ನು ವಾಪಸ್...
ಕೋಮುವಾದಿ ಪಕ್ಷ ದೂರ ಇಡಲು ಕಾಂಗ್ರೆಸ್ ನಮ್ಮನ್ನು ಬೆಂಬಲಿಸಲಿ : ರೇವಣ್ಣ.
ಬೆಂಗಳೂರು : ಕೋಮುವಾದಿ ಪಕ್ಷವನ್ನು ದೂರ ಇಡಲು ಕಾಂಗ್ರೆಸ್ ನಮ್ಮನ್ನು ಬೆಂಬಲಿಸಬೇಕು ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಮನವಿ ಮಾಡಿದರು.
ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ...
ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ವಜಾ ; ನೂತನ ರಾಜ್ಯಾಧ್ಯಕ್ಷ ನೇಮಕ…
ಶಿವಮೊಗ್ಗ : ರಾಜ್ಯ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾಗೊಳಿಸಲಾಗಿದ್ದು, ರೈತ ಸಂಘದ ನೂತನ ರಾಜ್ಯಾಧ್ಯಕ್ಷರಾಗಿ ಹೆಚ್.ಆರ್.ಬಸವರಾಜಪ್ಪ ಅವರನ್ನು ನೇಮಕ ಮಾಡಲಾಗಿದೆ.
ನಗರದ ರೈತ ಸಂಘ ಕಚೇರಿಯಲ್ಲಿ ನಡೆದ...
ಬೆಂಗಳೂರು : ಸ್ನೇಹಿತನ ಮೇಲೆ ಸ್ನೇಹಿತನಿಂದಲೇ ಆ್ಯಸಿಡ್ ದಾಳಿ!
ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕೆಲ ದಿನಗಳ ಹಿಂದಷ್ಟೇ ಭಗ್ನ ಪ್ರೇಮಿಯೊಬ್ಬ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದ. ಇದೀಗ ಈ ಘಟನೆ ಮಾಸುವ ಮುನ್ನವೇ ನಗರದಲ್ಲಿ ಮತ್ತೊಂದು ಆ್ಯಸಿಡ್ ದಾಳಿ ನಡೆದಿದೆ....
ರಾಜ್ಯಸಭೆ ಚುನಾವಣೆ : ನಾಮಪತ್ರ ಸಲ್ಲಿಸಿದ ನಿರ್ಮಲಾ ಸೀತಾರಾಮನ್.
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುತ್ತಿರುವ ಚುನಾವಣೆಗೆ ಕರ್ನಾಟಕದಿಂದ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ, ಮಾಜಿ...
ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯ ಮೇಲ್ಛಾವಣಿ ಕುಸಿತ…
ಬೆಂಗಳೂರು: ನಿರ್ಮಾಣ ಹಂತದ ಖಾಸಗಿ ಆಸ್ಪತ್ರೆಯ ಮೇಲ್ಛಾವಣಿ ಕುಸಿತಗೊಂಡಿದ್ದು, ಅವಶೇಷಗಳಡಿ ಕಾರ್ಮಿಕರು ಸಿಲುಕಿದ್ದಾರೆ. ನಾಲ್ವರ ಪೈಕಿ ಇಬ್ಬರನ್ನು ರಕ್ಷಿಸಲಾಗಿದ್ದು, ಇನ್ನಿಬ್ಬರಿಗಾಗಿ ರಕ್ಷಣಾ ಕಾರ್ಯ ಮುಂದುವರಿದಿದೆ.
ನೃಪತುಂಗ ರಸ್ತೆಯಲ್ಲಿರುವ ಸೆಂಟ್ ಮಾರ್ಥಾಸ್ ಆಸ್ಪತ್ರೆ ನವೀಕರಣ ಕಾಮಗಾರಿ...
ಯುಪಿಎಸ್‍ಸಿ ಫಲಿತಾಂಶ ಪ್ರಕಟ : ಶೃತಿ ಶರ್ಮಾ ಟಾಪರ್.. ಕರ್ನಾಟಕದ 25 ಅಭ್ಯರ್ಥಿಗಳು ಪಾಸ್…
ನವದೆಹಲಿ/ಬೆಂಗಳೂರು : ಕೇಂದ್ರ ನಾಗರಿಕ ಸೇವಾ ಆಯೋಗ (ಯುಪಿಎಸ್‍ಸಿ) 2021ರ ನಾಗರಿಕ ಸೇವೆಗಳ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟಗೊಂಡಿದ್ದು, ಈ ವರ್ಷ ಮೊದಲ ನಾಲ್ಕು ಸ್ಥಾನಗಳನ್ನು ವಿದ್ಯಾರ್ಥಿನಿಯರೇ ಪಡೆದುಕೊಂಡಿದ್ದಾರೆ.
ಒಟ್ಟು 685 ಅಭ್ಯರ್ಥಿಗಳು ಪರೀಕ್ಷೆಯಲ್ಲಿ...
ರಾಜಭವನದಲ್ಲಿ ಡಾ.ಅಂಬೇಡ್ಕರ್ ಪುತ್ಥಳಿ ಅನಾವರಣಗೊಳಿಸಿದ ರಾಜ್ಯಪಾಲರು.
ಬೆಂಗಳೂರು : ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ರಾಜಭವನದಲ್ಲಿ ನೂತನವಾಗಿ ಪ್ರತಿಷ್ಠಾಪಿಸಲಾಗಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಕಂಚಿನ ಪುತ್ಥಳಿಯನ್ನು ಅನಾವರಣಗೊಳಿಸಿ, ಪುಷ್ಪನಮನ ಸಲ್ಲಿಸಿ ನಾಡಿನ ಜನತೆಗೆ...
ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಮೊದಲ ಅಭ್ಯರ್ಥಿಯಾಗಿ ಜೈರಾಮ್ ರಮೇಶ್, 2ನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿಖಾನ್ ನಾಮಪತ್ರ ಸಲ್ಲಿಕೆ…
ಬೆಂಗಳೂರು : ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಮೊದಲನೇ ಅಭ್ಯರ್ಥಿಯಾಗಿ ಜೈರಾಮ್ ರಮೇಶ್ ಹಾಗೂ ಎರಡನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿಖಾನ್ ನಾಮಪತ್ರ ಸಲ್ಲಿಕೆ ಮಾಡಿದರು. ವಿಧಾನಸೌಧದಲ್ಲಿ ವಿಧಾನಸಭೆ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿಯಾಗಿರುವ ಎಂ.ಕೆ ವಿಶಾಲಾಕ್ಷಿಗೆ...
ಬೆಂಗಳೂರಿನಲ್ಲಿ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ…
ಬೆಂಗಳೂರು : ರಾಷ್ಟ್ರೀಯ ಕಿಸಾನ್ ಮೋರ್ಚಾ ಅಧ್ಯಕ್ಷ ರಾಕೇಶ್ ಸಿಂಗ್ ಟಿಕಾಯತ್ ಅವರ ಮೇಲೆ ಹಲ್ಲೆ ನಡೆಸಿ, ಮುಖಕ್ಕೆ ಮಸಿ ಬಳಿಯಲಾಗಿದೆ.
ಕೋಡಿಹಳ್ಳಿ ಚಂದ್ರಶೇಖರ್ ಅವರ ಮೇಲಿನ ಭ್ರಷ್ಟಾಚಾರ ಆರೋಪದ ಬಗ್ಗೆ ಇಂದು...












