ಈಜುಕೊಳದಲ್ಲಿ ಮೂವರು ಯುವತಿಯರ ಸಾವು: ರೆಸಾರ್ಟ್ ಮಾಲೀಕ, ಮ್ಯಾನೇಜರ್ ಬಂಧನ.
ಮಂಗಳೂರು: ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮೇಶ್ವರದ ವಾಝ್ಕೋ ಬೀಚ್ ರೆಸಾರ್ಟ್‍ನ ಮಾಲೀಕ ಮತ್ತು ಮ್ಯಾನೇಜರ್‍ನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ರೆಸಾರ್ಟ್ ಮಾಲೀಕ ಮನೋಹರ್ ಮತ್ತು ಮ್ಯಾನೇಜರ್ ಭರತ್...
ಅಬಕಾರಿ ಇಲಾಖೆಯಲ್ಲಿ 700 ಕೋಟಿ ರೂಪಾಯಿ ಭ್ರಷ್ಟಾಚಾರ ಆರೋಪ: ತನಿಖೆಗೆ SIT ರಚಿಸಿ.
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿನ 700 ಕೋಟಿ ರೂ. ಭ್ರಷ್ಟಾಚಾರ ಆರೋಪ ಕುರಿತು ಎಸ್‍ಐಟಿ ರಚನೆ ಮಾಡಿ ತನಿಖೆ ನಡೆಸಿ ಎಂದು ಸರ್ಕಾರಕ್ಕೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಆಗ್ರಹಿಸಿದ್ದಾರೆ. ಹಿಂದಿನ ಬಿಜೆಪಿ...
ಬಿಪಿಎಲ್, ಎಪಿಎಲ್ ಕಾರ್ಡ್‍ದಾರರಿಗೆ ಸರ್ಕಾರದಿಂದ ಬಿಗ್ ಶಾಕ್.
ಬೆಂಗಳೂರು: ಬಿಪಿಎಲ್, ಎಪಿಎಲ್ ಕಾರ್ಡ್‍ದಾರರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. ಆಧಾರ್ ಲಿಂಕ್ ಆಗದ ಬಿಪಿಎಲ್, ಎಪಿಎಲ್ ಕಾರ್ಡ್‍ಗಳನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ರದ್ದುಗೊಳಿಸಿದೆ. ಈಗಾಗಲೇ ಲಕ್ಷಾಂತರ...
ಇ-ಖಾತಾ ಪಡೆಯಲು ಶೀಘ್ರದಲ್ಲೇ ಬಿಬಿಎಂಪಿ ಯಿಂದ ಹೊಸ ಪೋರ್ಟಲ್ ಆರಂಭ.
ಬೆಂಗಳೂರು: ವಂಚನೆಯನ್ನು ತೆಗೆದುಹಾಕಲು ಹಾಗೂ ವಾರ್ಷಿಕ ತೆರಿಗೆ ಸಂಗ್ರಹಣೆಯನ್ನು ಸುಧಾರಿಸಲು ಸುಮಾರು 22 ಲಕ್ಷ ಆಸ್ತಿಗಳನ್ನು ಡಿಜಿಟಲೀಕರಣಗೊಳಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇದೀಗ ಖಾತಾಗಳನ್ನು ನೀಡದ 5 ಲಕ್ಷ ಆಸ್ತಿಗಳನ್ನು ತೆರಿಗೆ...
ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಮತ್ತೊಂದು ದೂರು, ಗಡಿಪಾರಿಗೆ ಆಗ್ರಹ.
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಕ್ರಮವಾಗಿ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್ ಇಂದು ಮತ್ತೊಂದು ದೂರು ದಾಖಲಿಸಿದೆ....
ಬಿಜೆಪಿ ಶಾಸಕ ಮುನಿರತ್ನ ಹನಿಟ್ರ್ಯಾಪ್ ಪ್ರಕರಣ: ಇನ್ಸ್ಪೆಕ್ಟರ್ ಐಯಣ್ಣ ರೆಡ್ಡಿ ಬಂಧನ.
ಬೆಂಗಳೂರು: ರಾಜರಾಜೇಶ್ವರಿನಗರ ಬಿಜೆಪಿ ಶಾಸಕ ಮುನಿರತ್ನ ಹನಿಟ್ರ್ಯಾಪ್ ಪ್ರಕರಣದಲ್ಲಿ ಒಳಸಂಚು ರೂಪಿಸಿದ್ದ ಆರೋಪದಡಿ ಹೆಬ್ಬಗೋಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಐಯಣ್ಣ ರೆಡ್ಡಿ ಅವರನ್ನು ಸಿಐಡಿಯ ವಿಶೇಷ ತನಿಖಾ ದಳದ ಪೊಲೀಸರು ಬಂಧಿಸಿದ್ದಾರೆ. ಗುರುವಾರ...
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಹಿನ್ನಲೆ ಸಚಿವ ಜಮೀರ್ ಅಹ್ಮದ್‍ಗೆ ಲೋಕಾಯುಕ್ತ ಇಲಾಖೆಯಿಂದ ನೋಟಿಸ್.
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್‍ಗೆ ಲೋಕಾಯುಕ್ತ ನೋಟಿಸ್ ನೀಡಿದೆ. ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಡಿಸೆಂಬರ್ 3 ರಂದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಡಿವೈಎಸ್‍ಪಿ ನೋಟಿಸ್ ನೀಡಿದ್ದಾರೆ....
ಉದ್ಘಾಟನೆಗೊಂಡ ಮೂರೇ ತಿಂಗಳಿಗೆ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿದ್ದ ಚಿಕ್ಕೋಡಿ ಸೇತುವೆ ಕುಸಿತ.
ಅಥಣಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ 6.50 ಕೋಟಿ ರೂಪಾಯಿ ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಇತ್ತೀಚೆಗೆ ನಿರ್ಮಿಸಲಾದ ಮಾಂಜರಿ-ಬವನಸೌಂದತ್ತಿ ಸೇತುವೆ-ಕಮ್-ಬ್ಯಾರೇಜ್ ಉದ್ಘಾಟನೆಗೊಂಡ ಮೂರು...
ಹಸಿರು ಆಂದೋಲನ: ನಮ್ಮ ಮೆಟ್ರೊಗೆ ಗ್ರೀನ್ ಚಾಂಪಿಯನ್ ಪ್ರಶಸ್ತಿ.
ಬೆಂಗಳೂರು: ಭಾರತದಲ್ಲಿ ಹಸಿರು ಚಳುವಳಿಯನ್ನು ಮುನ್ನಡೆಸುತ್ತಿರುವ ಮೆಟ್ರೋ ರೈಲು ಪ್ರಾಧಿಕಾರದ ವರ್ಗದ ಅಡಿಯಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆಯುತ್ತಿರುವ ಗ್ರೀನ್ ಬಿಲ್ಡಿಂಗ್ ಕಾಂಗ್ರೆಸ್-2024 ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶುಕ್ರವಾರ ಬೆಂಗಳೂರು...
ಪ್ರವಾಸಕ್ಕೆಂದು ಬೆಂಗಳೂರಿಗೆ ಬಂದಿದ್ದ ಮಾಲ್ಡೀವ್ಸ್ ಪ್ರಜೆ ಅನುಮಾನಾಸ್ಪದ ಸಾವು.
ಬೆಂಗಳೂರು: ಪ್ರವಾಸಕ್ಕೆಂದು ಬೆಂಗಳೂರು ನಗರಕ್ಕೆ ಬಂದಿದ್ದ ಮಾಲ್ಡೀವ್ಸ್ ಮೂಲದ ಪ್ರಜೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಆರ್.ಟಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮಾಲ್ಡೀವ್ಸ್ ಪ್ರಜೆ ಹಸನ್ ಸುಹೇಲ್ (43) ಎಂದು...












