ಕಾವೇರಿ ನೀರಿನ ಅನ್ಯಾಯದ ವಿರುದ್ದ ಕೇಂದ್ರದ ಮುಂದೆ ಪ್ರತಿಭಟಿಸುತ್ತೇವೆ- ಮುಖ್ಯಮಂತ್ರಿ ಕುಮಾರಸ್ವಾಮಿ…

256
firstsuddi

ಬೆಂಗಳೂರು-ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕಾವೇರಿ ವಿಚಾರದಲ್ಲಿ ನಿರ್ವಹಣಾ ಮಂಡಳಿ ರಚನೆಯಿಂದ ನಮಗೆ ಅನ್ಯಾಯವಾಗಿದೆ. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಗೆ ರಾಜ್ಯದಿಂದ ನಮ್ಮ ಪ್ರತಿನಿಧಿಗಳನ್ನು ಕಳುಹಿಸುತ್ತೇವೆ. ನಮಗಾಗಿರುವ ಅನ್ಯಾಯದ ಬಗ್ಗೆ ಕೇಂದ್ರದ ಮುಂದೆ ಪ್ರತಿಭಟಿಸುತ್ತೇವೆ ಎಂದು ಕುಮಾರಸ್ವಾಮಿ ತಿಳಿಸಿದರು. ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ನಮ್ಮ ವಿರೋಧವಿದೆ. ಈ ವಿಚಾರದಲ್ಲಿ ನಾವೆಲ್ಲರೂ ಒಂದೇ ಅಭಿಪ್ರಾಯಕ್ಕೆ ಬರಬೇಕಿದೆ. ನೀರಿನ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ. ನಿರ್ವಹಣಾ ಮಂಡಳಿ ರಚನೆಯಿಂದ ನಮ್ಮ ಅಧಿಕಾರ ಕಳೆದುಕೊಂಡಂತಾಗಿದೆ ಎಂದು ಹೇಳಿದ್ದಾರೆ. ಸರ್ವಪಕ್ಷಗಳ ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ವಿರೋಧಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ,ಸಂಸದ ಕೆ.ಹೆಚ್. ಮುನಿಯಪ್ಪ, ಪ್ರತಾಪ ಸಿಂಹ, ಸಿ.ಎಸ್. ಪುಟ್ಟರಾಜು,  ಸಚಿವ ಎನ್. ಮಹೇಶ್, ಎ.ಜಿ. ಉದಯ್ ಹೊಳ್ಳ, ಸಚಿವ ಡಿ.ಸಿ. ತಮ್ಮಣ್ಣ, ಕೇಂದ್ರ ಸಚಿವ ಅನಂತ ಕುಮಾರ್,  ಮುಂತಾದವರು ಸಭೆಯಲ್ಲಿ ಉಪಸ್ಥಿತರಿದ್ದರು.