ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೆ ಸಿಬಿಐ ಸಮ್ಮನ್ಸ್ ಜಾರಿ…

164
firstsuddi

ಬೆಂಗಳೂರು : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೆ ಸಿಬಿಐ ಅಧಿಕಾರಿಗಳು ಶಾಕ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸಮ್ಮನ್ಸ್ ಜಾರಿ ಮಾಡಲಾಗಿದೆ. ಅಕ್ರಮ ಆಸ್ತಿ ಗಳಿಕೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಅಕ್ಟೋಬರ್ 5ರಂದು ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್ ಅವರು ಸೇರಿದಂತೆ ಅವರ ಆಪ್ತರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಹಿನ್ನೆಲೆ, ನವೆಂಬರ್ 23ರಂದು ಪುನಃ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಅಧಿಕಾರಿಗಳು ಸಮ್ಮನ್ಸ್ ಜಾರಿ ಮಾಡಿದ್ದಾರೆ.
ಸಿಬಿಐ ನೊಟೀಸ್ ನೀಡಿರುವ ಕುರಿತು ಪ್ರತಿಕ್ರಯಿಸಿರುವ ಅವರು, ಬೆಂಗಳೂರಿನ ಸಿಬಿಐ ಅಧಿಕಾರಿಗಳು ಸಮ್ಮನ್ಸ್ ನೀಡಿರುವುದು ನಿಜ. ನವೆಂಬರ್ 19ರಂದು ಅಧಿಕಾರಿಗಳು ನಮ್ಮ ನಿವಾಸಕ್ಕೆ ಸಮ್ಮನ್ಸ್ ನೀಡಲು ಬಂದಿದ್ದರು. ನವೆಂಬರ್ 23ರಂದು ಸಂಜೆ 4 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದು, ಆದರೆ ನಾನು ಮಸ್ಕಿ ಹಾಗೂ ಬಸವಕಲ್ಯಾಣ ಕ್ಷೇತ್ರಗಳಿಗೆ ತೆರಳುತ್ತಿರುವ ಹಿನ್ನೆಲೆ ನ, 25ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.