ಶ್ರೀನಗರ : ಗಡಿಯಲ್ಲಿ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಪಾಕ್ ಸೇನೆ ಗುಂಡಿನ ದಾಳಿಗೆ ಭಾರತೀಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಜಮ್ಮು ಕಾಶ್ಮೀರಾದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಸೇನೆ ನಿನ್ನೆ ರಾತ್ರಿ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಭಾರತೀಯ ಸೈನಿಕರು ದಾಳಿ ನಡೆಸಿದ್ದರೂ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದು, ಅಲ್ಲದೇ ಪಾಕ್ ಗುಂಡಿನ ದಾಳಿಗೆ ಒಬ್ಬರು ಅಧಿಕಾರಿ ಸೇರಿದಂತೆ ಮೂವರು ಯೋಧರು ಗಾಯಗೊಂಡಿದ್ದಾರೆ. ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸೇನಾ ಮೂಲಗಳಿಂದ ತಿಳಿದು ಬಂದಿದೆ.










