ಮೂಡಿಗೆರೆಯಲ್ಲಿ ಮಳೆಯ ನಡುವೆಯೂ ಅದ್ದೂರಿ ಸ್ವಾತಂತ್ರ್ಯ ದಿನಾಚರಣೆ ಆಚರಣೆ …

561

ಮೂಡಿಗೆರೆ- 72ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಮೂಡಿಗೆರೆ ಹೊಯ್ಸಳ ಕ್ರೀಡಾಂಗಣ ದಲ್ಲಿ ಮಳೆಯ ನಡುವೆಯೂ ಅದ್ದೂರಿಯಾಗಿ ಆಚರಿಸಲಾಗಿದ್ದು, ಹೊಯ್ಸಳ ಕ್ರೀಡಾಂಗಣದಲ್ಲಿ ತಹಶೀಲ್ದಾರ್ ರಾದ ಪದ್ಮನಾಭಶಾಸ್ತ್ರಿ ಧ್ವಜಾರೋಹಣ ನೇರವೇರಿಸಿದ್ದು, ಮಳೆ ಬಂದ ಹಿನ್ನಲೆ ಕಾರ್ಯಕ್ರಮವನ್ನು ಅಡ್ಯಂತಾಯ ರಂಗಮಂದಿರದಲ್ಲಿ ಮುಂದುವರೆಸಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಎಂ ಪಿ ಕುಮಾರಸ್ವಾಮಿ ವಹಿಸಿದ್ದು, ತಾಲೂಕಿನ ಸಾಧಕರಿಗೆ ಪ್ರಶಸ್ತಿ ಪ್ರಧಾನ, ಹಾಗೂ ವಸತಿ ರಹಿತರಿಗೆ ಹಕ್ಕು ಪತ್ರ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಕೆ ಪ್ರಾಣೇಶ್ , ತಾಲೂಕು ಪಂಚಾಯಿತಿ ಅಧ್ಯಕ್ಷ ಕೆ.ಸಿ ರತನ್ ಕುಮಾರ್, ಉಪಸ್ಥಿತರಿದ್ದರು. ಹಾಗೂ ವಿವಿಧ ಸಂಘ ಸಂಸ್ಥೆಗಳು, ವಿದ್ಯಾರ್ಥಿಗಳು,ಭಾಗವಹಿಸಿದ್ದರು.