ನವದೆಹಲಿ: ಪ್ರಧಾನಿ ಮೋದಿ ಸರ್ಕಾರ ಮಧ್ಯಂತರ ಬಜೆಟ್ನಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಸಣ್ಣ ಮತ್ತು ಮಧ್ಯಮ ರೈತರ ಖಾತೆಗಳಿಗೆ ವಾರ್ಷಿಕ 6 ಸಾವಿರ ರೂಪಾಯಿ ಜಮಾ ಮಾಡಲಾಗುವುದು. 5 ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರ ಅಕೌಂಟ್ ಗೆ ಮೂರು ಕಂತುಗಳಲ್ಲಿ 2 ಸಾವಿರ ಹಾಕಲಾಗುವುದು ಎಂದು ಬಜೆಟ್ನಲ್ಲಿ ಕೇಂದ್ರ ಹಣಕಾಸು ಸಚಿವ ಪಿಯೂಷ್ ಗೊಯಲ್ ಘೋಷಿಸಿದ್ದಾರೆ. ಪ್ರಕೃತಿ ವಿಪತ್ತಿಗೆ ನಷ್ಟಕ್ಕೊಳಗಾದ ಎಲ್ಲ ರೈತರಿಗೂ ಹೊಸ ಯೋಜನೆ ಮೂಲಕ ನೆರವು ನೀಡುವ ಯೋಜನೆಯನ್ನು ಘೋಷಿಸಲಾಗಿದೆ.










