ಚಾಮರಾಜನಗರ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದೆ ಎಂದರೆ ಅದಕ್ಕೆ ಕಾರಣ ಧ್ರುವನಾರಾಯಣ್ ಅವರ ಶ್ರಮ : ಸಿದ್ದರಾಮಯ್ಯ…

193
firstsuddi

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮರಾಜನಗರದಲ್ಲಿ ಆಯೋಜಿಸಿದ್ದ ಕಾಂಗ್ರೆಸ್-ಜೆಡಿಎಸ್ ಸಮಾವೇಶವನ್ನು ಕುರಿತು ಟ್ವೀಟ್ ಮಾಡಿದ್ದು, ಚಾಮರಾಜನಗರ ಲೋಕಸಭೆ ಕ್ಷೇತ್ರದ ಟಿ.ನರಸೀಪುರದಲ್ಲಿ ಆಯೋಜಿಸಿದ್ದ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ, ಧ್ರುವನಾರಾಯಣ ಅವರಿಗೆ ಮತ ನೀಡುವಂತೆ ಕೋರಿದೆ. ಇಂದು ಚಾಮರಾಜನಗರ ಅಭಿವೃದ್ಧಿಯ ಹಾದಿಯಲ್ಲಿ ಮುಂಚೂಣಿಯಲ್ಲಿದೆ ಎಂದರೆ ಅದಕ್ಕೆ ಕಾರಣ ಧ್ರುವನಾರಾಯಣ್ ಅವರ ಶ್ರಮ. ಮತ ಚಲಾಯಿಸುವಾಗ ಇದನ್ನು ಜನರು ನೆನಪಿಸಿಕೊಳ್ಳಬೇಕು ಎಂದು ಟ್ವೀಟ್ ಮಾಡಿದ್ದಾರೆ.