ಮೈಸೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ ಕಿಚ್ಚುಗತ್ತಿ ಮಾರಮ್ಮನ ದೇವಾಲಯದಲ್ಲಿ ವಿಷ ಪ್ರಸಾದ ಸೇವಿಸಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವಿಸಿ ಅಸ್ವಸ್ಥರಾಗಿದ್ದ ದುಂಡಮ್ಮ (50) ಅವರನ್ನು ಮೈಸೂರಿನ ಕಾವೇರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ದುಂಡಮ್ಮ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.










