ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ, ಮಗು ಸೇರಿದಂತೆ ಇಬ್ಬರ ಸ್ಥಿತಿ ಗಂಭೀರ…

825

ಚಿಕ್ಕಮಗಳೂರು : ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿರುವ ಘಟನೆ ಕಳೆದ ರಾತ್ರಿ ನಗರದ ಐ.ಜಿ ‌ರಸ್ತೆಯಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿ ಬೈಕ್ ಮತ್ತು ಎರಡು ಕಾರು‌ಗಳಿಗೆ ಡಿಕ್ಕಿ ಹೊಡೆದಿದ್ದು, ಬೈಕಿನಲ್ಲಿದ್ದ ಮಗು ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗಾಯಗಳಾಗಿದೆ. ಇದರಿಂದ ರೊಚ್ಚಿಗೆದ್ದ ಸ್ಥಳೀಯರು ಕಾರನ್ನು ಸಂಪೂರ್ಣ ಪುಡಿ ಪುಡಿ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಮೂವರನ್ನು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕ್ಕಮಗಳೂರು ಟ್ರಾಫಿಕ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.