ಶಿವಮೊಗ್ಗ : ಚುನಾವಣಾ ಪ್ರಚಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮಗನ ಸೋಲಿನ ಭಯ ಕಾಡುತ್ತಿದೆ. ಹೀಗಾಗಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಕರೆತಂದು ಅವರ ಕೊನೆ ಆಟವನ್ನು ಆಡುತ್ತಿದ್ದಾರೆ. ಕುಮಾರಸ್ವಾಮಿ ಅವರು ಎಷ್ಟೇ ಆಟವಾಡಿದರು ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಅವರು ಗೆಲ್ಲುವುದು ನಿಶ್ಚಿತ ಎಂದು ಹೇಳಿದ್ದಾರೆ.










