ಬೆಂಗಳೂರು: ಬಹು ನಿರೀಕ್ಷಿತ ಮೂರನೇ 6 ಬೋಗಿಗಳ ಮೆಟ್ರೋ ರೈಲಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಚಾಲನೆ ನೀಡಿದರು.ವಿಧಾನಸೌಧದ ಡಾ ಅಂಬೇಡ್ಕರ್ ಮೆಟ್ರೋ ನಿಲ್ದಾಣದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು 6 ಬೋಗಿಗಳ ಮೂರನೇ ರೈಲಿಗೆ ಹಸಿರು ನಿಶಾನೆ ತೋರಿದರು. ಇದರಿಂದ 6 ಬೋಗಿಗಳ ಮೂರನೇ ರೈಲು ಇಂದಿನಿಂದ ಕಾರ್ಯಾಚರಣೆ ಆರಂಭಿಸಿದೆ. ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಹಾಗೂ ಬಿಬಿಎಂಪಿ ಮೇಯರ್ ಗಂಗಾಬಿಕೆ ಉಪಸ್ಥಿತರಿದ್ದರು.











