ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ನಿನ್ನೆ ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಂದರ್ಭದಲ್ಲಿ ವಸತಿ ಸಚಿವ ಎಂ.ಟಿ.ಬಿ. ನಾಗರಾಜ್, ಪ್ರವಾಸೋದ್ಯಮ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಉಪಸ್ಥಿತರಿದ್ದರು.










