ಚೆನ್ನೈ: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ನಿನ್ನೆ ಚೆನ್ನೈನ ರೇಲಾ ಇನ್ಸ್ಟಿಟ್ಯೂಟ್ ಆಂಡ್ ಮೆಡಿಕಲ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯ ವಿಚಾರಿಸಿದ್ದು, ಶ್ರೀಗಳು ಶೀಘ್ರವೇ ಗುಣಮುಖರಾಗಿ ಜನತಾ ಜನಾರ್ದನನ ಸೇವೆಯಲ್ಲಿ ತೊಡಗಲಿ. ಶ್ರೀಗಳು ಮಾಡುತ್ತಿರುವ ತ್ರಿವಿಧ ದಾಸೋಹ ಕೈಂಕರ್ಯ ಇಡೀ ದೇಶಕ್ಕೆ ಮಾದರಿಯಾಗಿದ್ದು ಅವರ ಆಶೀರ್ವಾದ ಎಲ್ಲರ ಮೇಲೂ ನಿರಂತರವಾಗಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.










