ನವದೆಹಲಿ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಕೇಂದ್ರ ಕಲ್ಲಿದ್ದಲು ಮತ್ತು ರೈಲ್ವೆ ಸಚಿವ ಪಿಯುಷ್ ಗೋಯಲ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ರಾಯಚೂರಿನ ಆರ್ ಟಿ ಪಿ ಎಸ್ ನಲ್ಲಿ ಕಲ್ಲಿದ್ದಲ್ಲು ಸಂಗ್ರಹ ಕಡಿಮೆ ಇರುವ ಹಿನ್ನಲೆಯಲ್ಲಿ ಕೂಡಲೇ ಕಲ್ಲಿದ್ದಲು ಒದಗಿಸುವಂತೆ ವೆಸ್ಟರ್ನ್ ಕೋಲ್ ಫೀಲ್ಡ್ಸ್ ಲಿ. ಹಾಗೂ ಕೋಲ್ ಇಂಡಿಯಾ ಲಿ.ಗಳಿಗೆ ಸೂಚನೆ ನೀಡುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಚಿವ ಪಿಯುಷ್ ಗೋಯಲ್ ಅವರಿಗೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಉಪಸ್ಥಿತರಿದ್ದರು.