ಬೆಂಗಳೂರು: ಉಪಚುನಾವಣೆ ಫಲಿತಾಂಶದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಲೋಕಸಭೆ ಹಾಗೂ ಕರ್ನಾಟಕ ಉಪ ಚುನಾವಣೆಯಲ್ಲಿ 5 ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳಲ್ಲಿ ಮೈತ್ರಿ ಸರ್ಕಾರದ ಅಭ್ಯರ್ಥಿಗಳು ಗೆದ್ದಿದ್ದಾರೆ. ಶಿವಮೊಗ್ಗ ಕ್ಷೇತ್ರದಲ್ಲಿ ನೈತಿಕ ಗೆಲುವಾಗಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಯನ್ನು ಅಪವಿತ್ರ ಎಂದು ಕರೆಯುತ್ತಿದ್ದ ಬಿಜೆಪಿಯವರಿಗೆ ಈ ಫಲಿತಾಂಶವು ತಕ್ಕ ಉತ್ತರ ನೀಡಿದೆ.ರಾಜ್ಯದ ಜನ ಮೈತ್ರಿ ಸರ್ಕಾರದ ಪರವಿದೆ ಎನ್ನುವುದಕ್ಕೆಈ ಚುನಾವಣೆ ಸಾಕ್ಷಿ ಯಾಗಿದೆ .ಚುನಾವಣೆಗೆ ಶ್ರಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ಡಿಕೆ ಶಿವಕುಮಾರ್,ಡಿಸಿಎಂ ಪರಮೇಶ್ವರ್, ಜೆಡಿಎಸ್ ನಾಯಕರಿಗೆ ಹಾಗೂ ಕಾಂಗ್ರೆಸ್ – ಜೆಡಿಎಸ್ ಪಕ್ಷದ ಕಾರ್ಯಕರ್ತರಿಗೆ ಕುಮಾರಸ್ವಾಮಿ ಅವರು ಅಭಿನಂದನೆ ಸಲ್ಲಿಸಿದರು.










