ಬೆಂಗಳೂರು : ಕಬ್ಬು ಬಾಕಿ ಪಾವತಿ, ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದ್ದು, ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಕಬ್ಬು ಬೆಳೆಗಾರರ ಸಮಸ್ಯೆ ಯನ್ನು ಕುರಿತು ಕಳೆದ ಮಂಗಳವಾರ ಸಭೆ ನಡೆಸಿದ್ದರು. ಇಂದು ಕೂಡ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮಧ್ಯಾಹ್ನ 12:30ಕ್ಕೆ ಸಭೆ ನಡೆಯಲಿದೆ.










