ಇಂದಿನಿಂದ ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ

295
firstsuddi

ಬೆಂಗಳೂರು: ವೈದ್ಯರ ಸಲಹೆ ಮೇರೆಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದಿನಿಂದ ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ.ಟಿಪ್ಪು ಜಯಂತಿ ಸೇರಿದಂತೆ ಮೂರು ದಿನಗಳ ಕಾಲ ಅವರು ಯಾವುದೇ ಸರ್ಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ.ಮೂರು ದಿನಗಳ ಕಾಲ ಅವರು ತಮ್ಮ ಕುಟುಂಬದೊಂದಿಗೆ ಕಾಲ ಕಳೆಯಲಿದ್ದಾರೆ. ಈ ಅವಧಿಯಲ್ಲಿ ಯಾವುದೇ ಅಧಿಕೃತ ಕಾರ್ಯಕ್ರಮಗಳು ಇರುವುದಿಲ್ಲ ಎಂಬುದಾಗಿ ತಿಳಿದು ಬಂದಿದೆ.