ಬೆಂಗಳೂರು : ಕಬ್ಬು ಬಾಕಿ ಪಾವತಿ, ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇಂದು ನಗರದ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು, ನಂತರ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ರೈತರನ್ನು ಪೊಲೀಸ್ ರು ತಡೆ ಹಿಡಿದಿದ್ದಾರೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ ಅವರು ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಚರ್ಚಿಸಲು ನಾಳೆ ಮಧ್ಯಾಹ್ನ 3 ಗಂಟೆಗೆ ರೈತ ಮುಖಂಡರು, ಸಕ್ಕರೆ ಕಾರ್ಖಾನೆ ಮಾಲೀಕರು, ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.










