ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಿನ್ನೆ ಮಂಗಳೂರಿಗೆ ಆಗಮಿಸಿದ್ದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕದ್ರಿ ಶಿವಭಾಗ್ ನಲ್ಲಿ ನಡೆದ ಶಾಸಕ ಭೋಜೇಗೌಡ ಅವರ ಕಚೇರಿ ಉದ್ಘಾಟನೆ ಬಳಿಕ ಅರ್ಜಿ ಹಿಡಿದು ಕುಳಿತಿದ್ದ ಹಿರಿಯ ನಾಗರೀಕರು, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ಹಲವು ನಾಗರೀಕರಿಂದ ಮುಖ್ಯಮಂತ್ರಿಗಳು ನೇರವಾಗಿ ಅಹವಾಲುಗಳನ್ನೂ ಆಲಿಸಿದ್ದಾರೆ.










