ಕಾನೂನು ಸುವ್ಯವಸ್ಥೆ ಬಗ್ಗೆ ಗಮನ ಹರಿಸಬೇಕು- ಮುಖ್ಯಮಂತ್ರಿ ಕುಮಾರಸ್ವಾಮಿ…

566
firstsuddi

ಬೆಂಗಳೂರು – ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಗೃಹ ಸಚಿವರಾದ ಡಾ// ಜಿ. ಪರಮೇಶ್ವರ್ ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆದಿದ್ದು, ಸಭೆ ಆರಂಭದಲ್ಲೆ ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿಕಾರಿಗಳಿಗೆ ಇದು ಸಂಮ್ಮಿಶ್ರ ಸರ್ಕಾರ ನಿಮಗೆ ಸಾಕಷ್ಟು ಒತ್ತಡ ಆಗಬಹುದು. ಒತ್ತಡವನ್ನು ಸಹಿಸಿಕೊಂಡು ಕೆಲಸವನ್ನು ಮಾಡುವಂತೆ ಅಧಿಕಾರಿಗಳಿಗೆ ಸಲಹೆ ನೀಡುವ ಜೊತೆಗೆ ಯಾರ ಮುಲಾಜಿನ ಅಗತ್ಯವಿಲ್ಲ. ಕಾನೂನು ಸುವ್ಯವಸ್ಥೆಯ ಬಗ್ಗೆ ಮಾತ್ರ ಗಮನಹರಿಸಬೇಕು ಎಂದು ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ತಿಳಿಸಿದರು.