ಕಾಂಗ್ರೆಸ್‍ನ ಹಿರಿಯ ಮುಖಂಡ ಎಂ.ವಿ. ರಾಜಶೇಖರನ್ ಅವರ ನಿಧನಕ್ಕೆ ಮುಖ್ಯಮಂತ್ರಿ ತೀವ್ರ ಸಂತಾಪ…

154
firstsuddi

ಬೆಂಗಳೂರು : ಕಾಂಗ್ರೆಸ್‍ನ ಹಿರಿಯ ಮುಖಂಡ ಎಂ.ವಿ. ರಾಜಶೇಖರನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಟ್ವಿಟರ್ ಮೂಲಕ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ ಎಂ.ವಿ. ಆರ್ ಅವರು ಸರಳ ಸಜ್ಜನಿಕೆಯ ಪ್ರಬುದ್ಧ ರಾಜಕಾರಣಿಯಾಗಿದ್ದರು. ಮಾಜಿ ಮುಖ್ಯಮಂತ್ರಿ ಎಸ್ ನಿಜಲಿಂಗಪ್ಪ ಅವರ ಅಳಿಯನಾದ ಅವರು, ಗ್ರಾಮೀಣ ಆರ್ಥಿಕತೆ ವಿಚಾರದಲ್ಲಿ ಆಳವಾದ ಜ್ಞಾನ ಹೊಂದಿದ್ದರು. ಗ್ರಾಮೀಣಾಭಿವೃದ್ಧಿ ಕುರಿತು ಅಧ್ಯಯನ ಸಂಸ್ಥೆ ಸ್ಥಾಪಿಸಿದ್ದರು. ಲೋಕಸಭೆ, ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಸದಸ್ಯರಾಗಿದ್ದ ಅವರು ಅತ್ಯುತ್ತಮ ಸಂಸದೀಯ ಪಟುವಾಗಿದ್ದರು. ಡಾ. ಮನಮೋಹನ್ ಸಿಂಗ್ ಸರ್ಕಾರದಲ್ಲಿ ಸಚಿವರಾಗಿ ಕೆಲಸ ಮಾಡಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿಕೊಂಡಿದ್ದಾರೆ. ಮೌಲ್ಯಾಧಾರಿತ ರಾಜಕಾರಣಿಯಾಗಿದ್ದ ಅವರ ನಿಧನ ದುಃಖದ ಸಂಗತಿ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ, ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.