ಬೆಂಗಳೂರು : ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಮುಖಂಡನ ಹತ್ಯೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹತ್ಯೆ ಮಾಡಿದ ಆರೋಪಿಯನ್ನು ಶೂಟೌಟ್ ಮಾಡಿ ಎಂದಿದ್ದರು . ಈ ಹೇಳಿಕೆಗೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾದ್ಯಕ್ತ ಬಿ ಎಸ್ ಯಡಿಯೂರಪ್ಪ ಅವರು ಶೂಟೌಟ್ ಮಾಡಿ ಎಂಬ ಮುಖ್ಯಮಂತ್ರಿ ಹೇಳಿಕೆ ತಪ್ಪು. ಅಧಿಕಾರಿಗಳಿಗೆ ಫ್ರೀ ಹ್ಯಾಂಡ್ ನೀಡುವ ಹಾಗೆ ಮಾತನಾಡಿದ್ದಾರೆ. ಇಂತಹ ಹೇಳಿಕೆಗಳು ರಾಜ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ.ಮುಖ್ಯಮಂತ್ರಿಗಳು ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು. ಕೊಲೆ ಮಾಡಿದವರು ಬಿಜೆಪಿಯವರೇ ಆಗಲೀ, ಕಾಂಗ್ರೆಸ್ನವರೇ ಆಗಲೀ, ಜೆಡಿಎಸ್ನವರೇ ಆಗಲೀ, ಹಂತಕರಿಗೆ ಕಾನೂನಿನ ಪ್ರಕಾರ ಕಠಿಣ ಶಿಕ್ಷೆಯಾಗಬೇಕು ಎಂದಿದ್ದಾರೆ.










