ದೇವರ ಪ್ರಸಾದ ಸೇವಿಸಿ ಮಹಿಳೆ ಸಾವು..?

199
firstsuddi

ಚಿಕ್ಕಬಳ್ಳಾಪುರ: ಸುಳ್ವಾಡಿ ಗ್ರಾಮದ ವಿಷ ಪ್ರಸಾದ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಅಂಥಹದ್ದೇ ಘಟನೆ ನಡೆದಿದೆ. ಜಿಲ್ಲೆಯ ಚಿಂತಾಮಣಿ ನಗರದ ಗಂಗಾಭವಾನಿ ದೇವಸ್ಥಾನದಲ್ಲಿ ವಿತರಿಸಿದ್ದ ಪ್ರಸಾದ ಸೇವಿಸಿ ಕವಿತಾ ((28)) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಪ್ರಸಾದ ಸೇವಿಸಿ 6 ಮಂದಿ ಅಸ್ವಸ್ಥರಾಗಿದ್ದು, ಅವರನ್ನು ಕೋಲಾರದ ಎಸ್ಎನ್ಆರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ  ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.