ಚಿಕ್ಕಮಗಳೂರು : ಚೀನಾದಲ್ಲಿ 500ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದಿರುವ ಕೊರೊನಾ ವೈರಸ್ ಕೇರಳದಲ್ಲೂ ಕಾಣಿಸಿಕೊಂಡಿದ್ದು, ಜಿಲ್ಲೆಗೂ ಹರಡುವ ಸಾಧ್ಯತೆ ಇದೆ ಎಂದು ಕೇರಳ ಪ್ರವಾಸಿಗರಿಗೆ ನಿರ್ಬಂಧ ಹೇರುವಂತೆ ವಿವಿಧ ಸಂಘಟನೆಗಳಿಂದ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅವರಿಗೆ ಮನವಿ ಸಲ್ಲಿಸಲಾಗಿದೆ. ಚಿಕ್ಕಮಗಳೂರು ಪ್ರವಾಸಿ ಜಿಲ್ಲೆಯಾಗಿದ್ದು, ಕೇರಳ, ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಈ ನಡುವೆ ಕೇರಳದಲ್ಲೂ ಕೊರೊನಾ ವೈರಸ್ ಮೂವರಲ್ಲಿ ಹರಡಿರುವುದು ದೃಢಪಟ್ಟಿದ್ದು, ಕೇರಳದಿಂದ ಪ್ರವಾಸಿಗರು ಪ್ರವಾಸಕ್ಕೆ ಬಂದರೆ ಕೊರೊನಾ ವೈರಸ್ ನಮ್ಮ ಜಿಲ್ಲೆಯಲ್ಲೂ ಹರಡುವ ಸಾಧ್ಯತೆಗಳಿದ್ದು, ಹೀಗಾಗಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ಕೇರಳ ಪ್ರವಾಸಿಗರಿಗೆ ನಿರ್ಬಂಧ ಹೇರಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಅಲ್ಲದೆ ಇತ್ತೀಚೆಗೆ ಜಿಲ್ಲಾಧಿಕಾರಿಗಳು ಕೊರೊನಾ ವೈರಸ್ ಹರಡುವ ಸಾಧ್ಯತೆಗಳಿದೆ ಎಂದು ಜಿಲ್ಲಾಧ್ಯಂತ ಎಚ್ಚರಿಕೆ ವಹಿಸಬೇಕೆಂದು ಸೂಚನೆ ನೀಡಿದ್ದರು.
Home ಸ್ಥಳಿಯ ಸುದ್ದಿ ಚಿಕ್ಕಮಗಳೂರು : ಕೊರೊನಾ ವೈರಸ್ ಹರಡುವ ಸಾಧ್ಯತೆ-ಕೇರಳ ಪ್ರವಾಸಿಗರಿಗೆ ನಿರ್ಬಂಧ ಹೇರುವಂತೆ ವಿವಿಧ ಸಂಘಟನೆಗಳಿಂದ ಜಿಲ್ಲಾಧಿಕಾರಿಗಳಿಗೆ...










