ಚಿಕ್ಕಮಗಳೂರು : ಜಿಲ್ಲೆಯಲ್ಲಿ ಐದು ದಿನಗಳ ಬಳಿಕ ಇಂದು ಮತ್ತೆ ಮೂರು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಮುಂಬೈನಿಂದ ಆಗಮಿಸಿ ಕೊಪ್ಪದಲ್ಲಿ ಕ್ವಾರಂಟೈನ್ ನಲ್ಲಿದ್ದ 35, 32 ಹಾಗೂ 31 ವರ್ಷದ ಮೂವರು ಪುರುಷರಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.










