ಚಿಕ್ಕಮಗಳೂರು :ಝರಿ ಫಾಲ್ಸ್ ಬಳಿ 40 ಅಡಿ ಪ್ರಪಾತಕ್ಕೆ ಬಿದ್ದ ಪ್ರವಾಸಿ ಜೀಪ್: ಮೂವರು ಪಾರು.

4

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿ ಜೀಪ್ 40 ಅಡಿ ಆಳದ ಪ್ರಪಾತಕ್ಕೆ ಉರುಳಿ ಕಾರ್ಮಿಕರ ವಾಸದ ಮನೆ ಮೇಲೆ ಬಿದ್ದ ಘಟನೆ ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತಗಳ ಸಾಲಿನ ಝರಿ ಫಾಲ್ಸ್ ಬಳಿ ನಡೆದಿದೆ.
ಕೇರಳ ಮೂಲದ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪ್, ಸುಮಾರು 40 ಅಡಿ ಎತ್ತರದಿಂದ ಉರುಳಿ ಬಿದ್ದಿದ್ದು, ಅಪಘಾತದ ರಭಸಕ್ಕೆ ಜೀಪ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಜೀಪ್ ಬಿದ್ದ ರಭಸಕ್ಕೆ ಕಾರ್ಮಿಕರ ಲೈನ್ ಮನೆಯೂ ಹಾನಿಗೊಳಗಾಗಿದೆ.
ಅದೃಷ್ಟವಶಾತ್ ಚಾಲಕ ಸೇರಿದಂತೆ ಮೂವರು ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ.
ಚಾಲಕನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.