ಚಿಕ್ಕಮಗಳೂರು : ಈ ವರ್ಷವನ್ನು ಪರೀಕ್ಷೆ ಇಲ್ಲದ ವರ್ಷವೆಂದು ಘೋಷಿಸಿ : ಶೋಭಾ ಕರಂದ್ಲಾಜೆ.

156
firstsuddi

ಚಿಕ್ಕಮಗಳೂರು : ಕೊರೊನಾ ಅಟ್ಟಹಾಸ ನಡುವೆ ರಾಜ್ಯದಲ್ಲಿ ಶಾಲಾ ಕಾಲೇಜು ತೆರೆಯಬೇಕೋ, ಬೇಡವೋ ಎಂಬುವುದರ ಬಗ್ಗೆ ಚರ್ಚೆ ನಡೆಯುತ್ತಿದ್ದು, ಈ ನಡುವೆ ಸದ್ಯಕ್ಕೆ ಯಾವುದೇ ಕಾರಣಕ್ಕೂ ಶಾಲೆ ಆರಂಭಿಸುವುದು ಬೇಡ ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರು ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಮೊದಲು ಜೀವ ಉಳಿಸೋಣ, ಬಳಿಕ ಜೀವನ ಮಾಡೋಣ ಎಂದು ಹೇಳಿದ್ದಾರೆ. ಸದ್ಯಕ್ಕೆ ಯಾವುದೇ ಕಾರಣಕ್ಕೂ ಶಾಲೆ ಆರಂಭಿಸುವುದು ಬೇಡ, ಆನ್‍ಲೈನ್ ತರಗತಿಗಳನ್ನು ಮುಂದುವರೆಸಲು ಅಭ್ಯಂತರವಿಲ್ಲ. ರಾಜ್ಯ ಸೇರಿದಂತೆ ದೇಶಾದ್ಯಂತ ಕೊರೊನಾ ಸೋಂಕಿನಿಂದ ಶಿಕ್ಷಕರು ಕೂಡಾ ಮೃತಪಟ್ಟಿದ್ದಾರೆ. ಶಿಕ್ಷಕರು ದೇಶದ ಆಸ್ತಿ, ಅವರ ಬಗ್ಗೆಯೂ ಸರ್ಕಾರ ಕಾಳಜಿ ವಹಿಸಬೇಕು. ಶಿಕ್ಷಕರ ರಕ್ಷಣೆ, ಜೀವ ಉಳಿಸಲು ಆದ್ಯತೆ ನೀಡುವುದು ಸರ್ಕಾರದ ಕರ್ತವ್ಯವಾಗಿದೆ. ಅಲ್ಲದೇ ಕೊರೊನಾ ಅಟ್ಟಹಾಸದ ನಡುವೆ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವ ಸ್ಥತಿಯಲ್ಲಿ ಇಲ್ಲ. ಮಕ್ಕಳನ್ನು ಖಾಯಿಲೆ ಅಥವಾ ಸಮಸ್ಯೆಗೆ ದೂಡುವುದು ಸರಿಯಲ್ಲ. ಇದರಿಂದ 2020 ಜೀವ ಉಳಿಸುವ ವರ್ಷವಾಗಿದೆ, ಈ ವರ್ಷವನ್ನು ಪರೀಕ್ಷೆ ಇಲ್ಲದ ವರ್ಷವೆಂದು ಘೋಷಿಸಿ ಎಂದು ಮನವಿ ಮಾಡಿದ್ದಾರೆ.