ಚಿಕ್ಕಮಗಳೂರು : ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳ ಸದಸ್ಯರ ಚುನಾವಣೆಯನ್ನು ಏಕಕಾಲದಲ್ಲಿ ಒಂದೇ ದಿನ ನಡೆಯಲಿದ್ದು, ಜಿಲ್ಲಾಧಿಕಾರಿಗಳೂ ಆದ ಜಿಲ್ಲಾ ಚುನಾವಣಾ ಅಧಿಕಾರಿ ಡಾ. ಬಗಾದಿ ಗೌತಮ್ ಅವರು ಇದರ ಕುರಿತಿ ಅಧಿಸೂಚನೆಯನ್ನು ಪ್ರಕಟಿಸಿದ್ದಾರೆ.
ನಾಮಪತ್ರಗಳನ್ನು ಸಲ್ಲಿಸಲು ಡಿ.11 ಕೊನೆಯ ದಿನವಾಗಿದೆ. ಡಿ.12ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಡಿ.14 ಕೊನೆಯ ದಿನವಾಗಿದೆ. ಮತದಾನವು ಡಿ.22ರಂದು ನಡೆಯಲಿದೆ. ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಮರು ಮತದಾನದ ಅವಶ್ಯಕತೆ ಇದ್ದರೆ ಅದು ಡಿ.24ರಂದು ನಡೆಯಲಿದೆ ಹಾಗೂ ಡಿ.30ರಂದು ಮತಗಳ ಎಣಿಕೆ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.










